ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಇಂದು ಸಂತ್ರಸ್ತೆ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ, ಸಂತ್ರಸ್ತೆಯನ್ನು ವಿಚಾರಣೆ ನಡೆಸಿದ ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಯದ ಮುಂದೆ ಸೆಕ್ಷನ್ 164ರ ಅಡಿ ಸಂತ್ರಸ್ತೆ ಹೇಳಿಕೆ ದಾಖಲು ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಇಬ್ಬರೂ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಸಂತ್ರಸ್ತೆ ಹೊಳೆನರಸಿಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇನ್ನು ಪ್ರಕರಣದ ಪ್ರಮುಖ ಆರೋಪಿ ಹೆಚ್.ಡಿ.ರೇವಣ್ಣ ಕೂಡ ಇಂದು ಎಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ರೇವಣ್ಣರನ್ನು ಬಂಧಿಸುವ ಸಾಧ್ಯತೆ ದಟ್ಟವಾಗಿದೆ.