alex Certify BIG NEWS: ಪ್ರಮುಖ ಆರೋಪಿ ಪ್ರಜ್ವಲ್ ಬಂಧನ ಬೆನ್ನಲ್ಲೇ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ಎಸ್ಐಟಿ ತನಿಖೆ ಚುರುಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಮುಖ ಆರೋಪಿ ಪ್ರಜ್ವಲ್ ಬಂಧನ ಬೆನ್ನಲ್ಲೇ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ಎಸ್ಐಟಿ ತನಿಖೆ ಚುರುಕು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಇಂದಿನಿಂದ ವಿಚಾರಣೆಗೆ ಒಳಪಡಿಸಲಾಗುವುದು

ಎಸ್ಐಟಿ ತನಿಖೆ ಇಂದಿನಿಂದ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ. ಮೂರು ಪ್ರಕರಣಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ತಡರಾತ್ರಿ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ಅವರನ್ನು ಬಂಧಿಸಿ ಎಸ್ಐಟಿ ಕಚೇರಿಗೆ ಕರೆತರಲಾಗಿದೆ.

ಇಂದು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್ಐಟಿ ಪ್ರಕರಣಗಳ ತನಿಖೆಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ಕೇಳಲಿದೆ. ನ್ಯಾಯಾಲಯ ಕಸ್ಟಡಿಗೆ ನೀಡಿದರೆ ಪ್ರಜ್ವಲ್ ರೇವಣ್ಣ ಅವರ ವಿಚಾರಣೆ ನಡೆಸಲಾಗುವುದು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...