ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್ಐಟಿಯನ್ನು ರಚನೆ ಮಾಡಲಾಗಿದೆ. ಸಹಾಯಕ ಪೊಲೀಸ್ ಮಹಾ ನಿರ್ದೇಶಕಿ ಸುಮ್ ಪೆನ್ನೇಕರ್, ಮೈಸೂರು ಎಸ್.ಪಿ. ಸೀಮಾ ಲಾಟ್ಕರ್ ಸದಸ್ಯತ್ವದ ಎಸ್ಐಟಿ ರಚಿಸಲಾಗಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಕ್ರಿಮಿನಲ್ ಮೊಕದ್ದಮೆ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಸಿಐಡಿ ಡಿಜಿಪಿ ಮೇಲ್ವಿಚಾರಣೆಯಲ್ಲಿ ಎಸ್ಐಟಿ ಕಾರ್ಯನಿರ್ವಹಿಸಲಿದೆ. ತನಿಖೆ ನಡೆಸಿ ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಗೌರಿ ಲಂಕೇಶ್ ಕೊಲೆ ಪ್ರಕರಣದ ವಿಶೇಷ ತನಿಖಾ ದಳ ಸಾರಥ್ಯ ವಹಿಸಿದ್ದ ಪ್ರಸ್ತುತ ಸಿಐಡಿ ಎಡಿಜಿಪಿ ಆಗಿರುವ ಬಿಜಯ್ ಕುಮಾರ್ ಸಿಂಗ್ ಅವರಿಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ತನಿಖೆ ವಹಿಸಲಾಗಿದೆ.