ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸೋಮವಾರ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿದ್ದಾರೆ. ಅವರಿಗೆ ಕೈದಿ ನಂಬರ್ 5664 ಸಂಖ್ಯೆ ನೀಡಲಾಗಿದೆ ಎನ್ನಲಾಗಿದೆ. ಜೈಲಿಗೆ ಆಗಮಿಸಿದ ಪ್ರಜ್ವಲ್ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಕಾರಾಗೃಹದ ಅಧಿಕಾರಿಗಳು ವಿಶೇಷ ಭದ್ರತಾ ವಿಭಾಗದ ಸೆಲ್ ನಲ್ಲಿ ಇರಿಸಿದ್ದಾರೆ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 5664 ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮನೆ ಕೆಲಸದ ಮಹಿಳೆ ಮೇಲಿನ ಪ್ರಕರಣದಲ್ಲಿ ಅವರನ್ನು ಎಸ್ಐಟಿ ಬಂಧಿಸಿದೆ. ಉಳಿದ ಎರಡು ಪ್ರಕರಣಗಳಲ್ಲಿ ಅವರನ್ನು ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ ಎಂದು ಹೇಳಲಾಗಿದೆ.