alex Certify BREAKING NEWS: ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು; ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು; ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಅಮಾನತು ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕರು ಉಪಸ್ಥಿತರಿದ್ದರು. ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ನಿನ್ನೆ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...