ಗುವಾಹಟಿ: ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪ ಆಧಾರರಹಿತ ಎಂದು ಹೇಳಿದ್ದಾರೆ.
ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾವು ದೇಶದ ಮಾತೃಶಕ್ತಿ, ನಾರಿ ಶಕ್ತಿ ಜೊತೆ ನಿಂತಿದ್ದೇವೆ. ಭಾರತೀಯ ಜನತಾ ಪಾರ್ಟಿಯ ನಿಲುವು ಸ್ಪಷ್ಟವಾಗಿದೆ. ಪ್ರಧಾನಿ ಮೋದಿಗೆ ದೇಶದ ಜನರ ಮೇಲೆ ಬದ್ಧತೆ ಇದೆ. ಮಹಿಳೆಯರಿಗೆ ಆಗುವ ಅಪಮಾನವನ್ನು ನಮ್ಮ ಸರ್ಕಾರ ಎಂದೂ ಸಹಿಸಲ್ಲ ಎಂದಿದ್ದಾರೆ.
ನಾವು ದೇಶದ ನಾರಿಶಕ್ತಿ ಜೊತೆ ಇದ್ದೇವೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅನಗತ್ಯವಾಗಿ ಆರೋಪ ಮಾಡುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪ ಆಧಾರರಹಿತವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.