alex Certify BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಆಧಾರರಹಿತ ಆರೋಪ; ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಆಧಾರರಹಿತ ಆರೋಪ; ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ

ಗುವಾಹಟಿ: ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪ ಆಧಾರರಹಿತ ಎಂದು ಹೇಳಿದ್ದಾರೆ.

ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾವು ದೇಶದ ಮಾತೃಶಕ್ತಿ, ನಾರಿ ಶಕ್ತಿ ಜೊತೆ ನಿಂತಿದ್ದೇವೆ. ಭಾರತೀಯ ಜನತಾ ಪಾರ್ಟಿಯ ನಿಲುವು ಸ್ಪಷ್ಟವಾಗಿದೆ. ಪ್ರಧಾನಿ ಮೋದಿಗೆ ದೇಶದ ಜನರ ಮೇಲೆ ಬದ್ಧತೆ ಇದೆ. ಮಹಿಳೆಯರಿಗೆ ಆಗುವ ಅಪಮಾನವನ್ನು ನಮ್ಮ ಸರ್ಕಾರ ಎಂದೂ ಸಹಿಸಲ್ಲ ಎಂದಿದ್ದಾರೆ.

ನಾವು ದೇಶದ ನಾರಿಶಕ್ತಿ ಜೊತೆ ಇದ್ದೇವೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅನಗತ್ಯವಾಗಿ ಆರೋಪ ಮಾಡುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪ ಆಧಾರರಹಿತವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...