ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈನಡುವೆ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವೇ ವಿಳಂಬ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ.
ಪ್ರಜ್ವಲ್ ರೇವಣ್ಣನ ವಿರುದ್ಧ ದೂರು ದಾಖಲಾದ ತಕ್ಷಣವೇ ಕೇಂದ್ರ ಸರ್ಕಾರ ಪಾಸ್ ಪೋರ್ಟ್ ಅಮಾನತುಗೊಳಿಸಬಹುದಿತ್ತು, ಆದರೆ ಮಾಡಲಿಲ್ಲ, ಆತ ವಿದೇಶಕ್ಕೆ ತೆರಳಿದ ನಂತರವೂ ಅವಕಾಶವಿತ್ತು, ಆದರೆ ಕೇಂದ್ರ ಸರ್ಕಾರ ಪಾಸ್ ಪೋರ್ಟ್ ರದ್ದು ಮಾಡುವ ಕ್ರಮಕೈಗೊಂಡಿಲ್ಲ.
ಸ್ವತಃ ನರೇಂದ್ರ ಮೋದಿಯವರೇ, ಪ್ರಜ್ವಲ್ ರೇವಣ್ಣನ ರಕ್ಷಣೆಗೆ ನಿಂತಿದ್ದಾರೆಯೇ? ಬಿಜೆಪಿಗೆ ಮಹಿಳೆಯರ ಘನತೆಗಿಂತ ರಾಜಕೀಯ ಹಿತಾಸಕ್ತಿಯೇ ಮುಖ್ಯವಾಯ್ತೆ? ಎಂದು ಆಕ್ರೋಶ ವ್ಯಕ್ತಪಡಿಸಿದೆ.