ರಾಮನಗರ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಎಷ್ಟು ಅವಮಾನವಾಗಿದೆಯೋ ಅಷ್ಟೇ ಕರ್ನಾಟಕ ರಾಜ್ಯಕ್ಕೂ ಅವಮಾನವಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ ಪ್ರಕರಣ ಇದು ಇಡೀ ಕನ್ನಡಿಗರಿಗೆ, ಕರ್ನಾಟಕಕ್ಕೆ ಮಾಡಿದ ಅವಮಾನ. ಇಂತಹ ಘಟನೆಯನ್ನು ಎಲ್ಲರೂ ಖಂಡಿಸಬೇಕು ಎಂದರು.
ಎನ್ ಡಿಎ ಅಭ್ಯರ್ಥಿ ವಿರುದ್ಧ ಮಹಿಳೆಯರು ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆಯಾಗಬೇಕು. ಸಂತ್ರಸ್ತ ಮಹಿಳೆಯರಿಗೆ ಮಹಿಳಾ ಆಯೋಗದಿಂದ ರಕ್ಷಣೆ ಸಿಗಬೇಕು, ಮಾನವ ಹಕ್ಕುಗಳ ಆಯೋಗ, ನ್ಯಾಯಾಲಯದಿಂದ ರಕ್ಷಣೆ ಸಿಗಬೇಕು ಎಂದು ಆಗ್ರಹಿಸಿದರು.