ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಎಸ್ ಐಟಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಎಸ್ ಐಟಿ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಪೆನ್ ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕಲಾಗುತ್ತಿದೆ. ವಿದೇಶದಿಂದ ಪ್ರಜ್ವಲ್ ನನ್ನು ವಾಪಾಸ್ ಕರೆಸಿಕೊಳ್ಳುತ್ತೇವೆ. ಎಸ್ ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದರು.
ಎಲ್ಲಾ ವಿಡಿಯೋಗಳನ್ನು ಫಾರೆನ್ಸಿಕ್ ಲ್ಯಾಬ್ ಗೆ ಕಳುಹಿಸಲಾಗುವುದು. ದೂರು ದಾರರು ಯಾರ ಹೆಸರನ್ನು ಉಲ್ಲೇಖಿಸಿದ್ದಾರೆ ಅವರ ವಿರುದ್ಧವೂ ತನಿಖೆಯಾಗಲಿದೆ. ರೇವಣ್ಣ ಇರಲಿ, ಯಾರೇ ಇರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತರಿಗೆ ಬೆದರಿಕೆ ಹಾಕಿದರೆ ಅವರಿಗೆ ನಾವು ಭದ್ರತೆ ನೀಡುತ್ತೇವೆ ಎಂದು ಹೇಳಿದರು.