ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ.
ಎಡಿಟ್ ಮಾಡಿ ಪ್ರಜ್ವಲ್ ರೇವಣ್ಣ ಅಸ್ಲೀಲ ವಿಡಿಯೋ ಸೃಷ್ಟಿ ಮಾಡಿ ಹಂಚಲಾಗಿದೆ ಎಂದು ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜ್, ನವೀನ್ ಗೌಡ ಹಾಗೂ ಚೇತನ್ ಎಂಬುವವರ ವಿರುದ್ಧ ಹಾಸನ ಸೈಬರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಆದರೆ ಆರೊಪಿಗಳ ನಿರೀಕ್ಷಣಾ ಜಾಮೀನು ತಿರಸ್ಕರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ನಾಲ್ವರಿಗೆ ಬಂಧನ ಭೀತಿ ಶುರುವಾಗಿದೆ. ಈ ಮಧ್ಯೆ ಸೈಬರ್ ಕ್ರೈಂ ಠಾಣೆಯ ಕೇಸ್ ನ್ನು ಎಸ್ಐಟಿಗೆ ವರ್ಗಾಯಿಸಲಾಗಿದೆ. ಕೇಸ್ ವರ್ಗಾವಣೆಯಾಗುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ನಾಲ್ವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.