ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಇನ್ನಷ್ಟು ಅಶ್ಲೀಲ ವಿಡಿಯೋ, ಫೋಟೋಗಳನ್ನು ವೈರಲ್ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಹಿಲಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ವಿಡಿಯೋ ವೈರಲ್ ಮಾಡುತ್ತಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಮಹಿಳಾ ಅಧಿಕಾರಿಗಳೇ ಕಂಗಾಲಾಗಿದ್ದಾರೆ. ಇದರಿಂದ ಮೂರು ತಿಗಳ ರಜೆ ಮೇಲೆ ಅಧಿಕಾರಿಗಳು ತೆರಳುತ್ತಿದ್ದಾರೆ.
ಇನ್ನು ಕೆಲ ಅಧಿಕಾರಿಗಳಿಂದ ಮೇಲಧಿಕರಿಗಳಿಗೆ ವರ್ಗಾವಣೆಗಾಗಿ ಮನವಿ ಮಾಡಲಾಗಿದೆ. ಕೆಲವರನ್ನು ಈಗಗಲೇ ಅಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಎಸ್ ಐಟಿ ಅಧಿಕಾರಿಗಳು ತನಿಖೆ ಇನ್ನಷ್ಟು ಚುರುಕುಗೊಳಿಸಿದ್ದಾರೆ.