ಬೆಂಗಳೂರು: ಎನ್ ಡಿಎ ಮೈತ್ರಿ ಅಭ್ಯರ್ಥಿ, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಒಂದು ವೇಳೆ ಪ್ರಜ್ವಲ್ ರೇವಣ್ಣನನ್ನು ಉಚ್ಛಾಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಆರ್.ಅಶೋಕ್, ಲೋಕಸಭಾ ಚುನಾವಣಾ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಲಾಗಿತ್ತು. ಈಗಾಲೇ ಅಲ್ಲಿ ಚುನಾವಣೆ ಮುಗಿದಿದೆ. ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಪ್ರಕರಣಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಒಂದು ವೇಳೆ ಆಯ್ಕೆಯಾದರೂ ಎನ್ ಡಿಎಯಿಂದ ಪ್ರಜ್ವಲ್ ನನ್ನು ಉಚ್ಛಾಟನೆ ಮಾಡಲಾಗುವುದು ಎಂದರು.
ಪ್ರಜ್ವಲ್ ನನ್ನು ಎನ್ ಡಿಎ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತಾ ಅಥವಾ ಜೆಡಿಎಸ್ ಎಂದು ಪರಿಗಣಿಸಲಾಗುತ್ತಾ ಎಂಬುದನ್ನು ಚರ್ಚಿಸಲಾಗುವುದು. ಒಂದು ವೇಳೆ ಎನ್ ಡಿಎ ಅಭ್ಯರ್ಥಿಯಾಗಿ ಆಯ್ಕೆಯಾದರೆ ನಾವು ಉಚ್ಛಾಟನೆ ಮಾಡುತ್ತೇವೆ. ಜೆಡಿಎಸ್ ಎಂದಾದರೆ ಅವರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.