
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಕಾನೂನಿನ ಮುಂದೆ ಯಾರೂ ದೊಡ್ದವರಲ್ಲ ಕಾನೂನು ಪ್ರಕಾರ ಕ್ರಮವಾಗಲಿ ಎಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರ ಎಸ್ ಐಟಿ ರಚನೆ ಮಾಡಿದೆ. ಎಸ್ ಐಟಿ ತನಿಖೆ ಬಳಿಕ ವರದಿ ನಿಡಲಿದೆ. ವರದಿ ಬಂದ ಬಳಿಕ ಕಾನೂನು ಪ್ರಕಾರ ಸರ್ಕಾರ ಕ್ರಮ ಕೈಗೊಂಡೇ ಕೈಗೊಳ್ಳುತ್ತದೆ. ಕಾನೂನು ಪ್ರಕಾರ ಏನು ಕ್ರಮ ಆಗಬೇಕೋ ಅದನ್ನು ಸರ್ಕಾರ ಮಾಡಲಿ ಎಂದು ಹೇಳಿದರು.
ಇದರಲ್ಲಿ ಯಾರ ಪರ ನಿಲ್ಲುವ ಪ್ರಶ್ನೆ ಇಲ್ಲ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂದು ಹೇಳಿದರು.