ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳ ಒಂದು ತಂಡ ವಿದೇಶಕ್ಕೆ ತೆರಳಿದೆ.
ಬಂಧನ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ಹಾರಿದ್ದು, ಎಸ್ಐಟಿ ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದರು. ಪ್ರಜ್ವಲ್ ಗೆ ನೀಡಲಾಗಿದ್ದ ಸಮಯಾವಕಾಶದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳ ಒಂದು ತಂಡ ವಿದೇಶಕ್ಕೆ ತೆರಳಿದೆ ಎಂದು ತಿಳಿದುಬಂದಿದೆ.
ಪ್ರಜ್ವಲ್ ರೇವಣ್ಣ ಬಗ್ಗೆ ಖಚಿತ ಮಾಹಿತಿ ಪಡೆದು, ಎರಡು ದಿನಗಳ ಹಿಂದೆ ಎಸ್ಐಟಿಯ ಒಂದು ತಂಡ ವಿದೇಶಕ್ಕೆ ತೆರಳಿದ್ದು, ಪ್ರಜ್ವಲ್ ನನ್ನು ಒಪ್ಪಿಸಿ ದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಯತ್ನಿಸಲಾಗುತ್ತಿದೆ ಎಂದು ತಿಳಿದುಬಂದಿದೆ.