ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್ ಐಟಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯವರಿಗೆ ಗೊತ್ತಿದ್ದೂ ಪ್ರಜ್ವಲ್ ರೇವಣ್ಣನನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಈಗ ಯಾಕೆ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.
ಈಗ ಸಿ.ಟಿ.ರವಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸದಾನಂದಗೌಡ, ಆರ್.ಅಶೋಕ್ ಇವರೆಲ್ಲ ಎಲ್ಲಿ ಹೋದರು? ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ. ಈಗ ಮಹಿಳೆಯರಿಗೆ ಅನ್ಯಾಯವಾಗಿದೆ. ಈಗ ಯಾಕೆ ಮಾತನಾಡುತ್ತಿಲ್ಲ? ಸಂತ್ರಸ್ತ ಮಹಿಳೆಯರಿಗೆ ಧೈರ್ಯ ಹೇಳಬೇಲಾದ ಕೆಲಸವಾಗಬೇಕು. ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಮುಂದುವರೆದಿದೆ ಎಂದು ಹೇಳಿದರು.