ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತಂಡ ತನಿಖೆ ತೀವ್ರಗೊಳಿಸಿದೆ. ವಿಡಿಯೋದಲ್ಲಿ ಕೆಲ ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಇರುವುದು ಪತ್ತೆಯಾಗಿದೆ.
ಈ ನಡುವೆ ಪ್ರಕರಣದದಲ್ಲಿ ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಎಸ್ ಪಿ ಸೀಮಾ ಲಾಟ್ಕರ್ ಮುಂದೆ ಐವರು ಸಂತ್ರಸ್ತೆಯರು ವಿಚಾರಣೆಗೆ ಹಾಜರಾಗಿದ್ದಾರೆ. ಸಂತ್ರಸ್ತೆಯರ ವಿಚಾರಣೆ ನಡೆಸಿರುವ ಎಸ್ ಪಿ ಹಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.