alex Certify BIG NEWS: ಪ್ರಜ್ವಲ್ ವಿಡಿಯೋ ಬಿಡುಗಡೆ ಸ್ಥಳ ಪತ್ತೆ ಮಾಡಿದ ಎಸ್ಐಟಿ; ವಿಡಿಯೋ ರಿಲೀಸ್ ಗೂ ಎರಡು ದಿನ ಮೊದಲೇ ರೆಕಾರ್ಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಜ್ವಲ್ ವಿಡಿಯೋ ಬಿಡುಗಡೆ ಸ್ಥಳ ಪತ್ತೆ ಮಾಡಿದ ಎಸ್ಐಟಿ; ವಿಡಿಯೋ ರಿಲೀಸ್ ಗೂ ಎರಡು ದಿನ ಮೊದಲೇ ರೆಕಾರ್ಡ್

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ, ಮೇ 31ರಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದು, ಈ ವಿಡಿಯೋ ಎಲ್ಲಿಂದ ಬಿಡುಗಡೆ ಮಾಡಲಾಗಿದೆ ಎಂಬುದನ್ನು ಎಸ್ಐಟಿ ಪತ್ತೆ ಮಾಡಿದೆ.

ಪ್ರಜ್ವಲ್ ರೇವಣ್ಣ ಯುರೋಪ್ ನ ಹಂಗೇರಿಯ ಬುಡಾಪೆಸ್ಟ್ ನಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋ ರಿಲೀಸ್ ಆದ ಮೊಬೈಲ್ ಐಪಿ ಅಡ್ರೆಸ್ ಟ್ರೇಸ್ ಮಾಡುವ ಮೂಲಕ ಎಸ್ಐಟಿ ಈ ಮಾಹಿತಿ ಕಲೆ ಹಾಕಿದೆ. ವಿಡಿಯೋ ಹೇಳಿಕೆ ಬಿಡುಗಡೆಗೂ ಎರಡು ದಿನ ಮೊದಲೇ ರೆಕಾರ್ಡ್ ಆಗಿತ್ತು ಎಂಬುದನ್ನೂ ಎಸ್ಐಟಿ ಟೆಕ್ನಿಕಲ್ ಟೀಮ್ ಪತ್ತೆ ಮಾಡಿದೆ.

ಪ್ರಜ್ವಲ್ ರೇವಣ್ಣ ದೇಶಕ್ಕೆ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಲು ಎಸ್ಐಟಿ ಸಿದ್ಧತೆ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...