ಬೆಂಗಳೂರು : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಾಪಸ್ ದೇಶಕ್ಕೆ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಪ್ರಜ್ವಲ್ ರೇವಣ್ಣ ಈಗಾಗಲೇ ಪ್ರಜ್ವಲ್ ರೇವಣ್ಣ ಬಂಧಿಸಲು ವಾರೆಂಟ್ ಜಾರಿ ಮಾಡಲಾಗಿದೆ. ಆದ್ದರಿಂದ ಅವರು ಭಾರತಕ್ಕೆ ಬರುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಹೇಳಿದರು.
ಈ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಎಂಬ ಆಧಾರದ ಮೇಲೆ ಬಂಧಿಸುತ್ತಿಲ್ಲ. ತನಿಖೆ ವೇಳೆ ಅನುಮಾನ ಬಂದವರನ್ನು ಎಸ್ ಐ ಟಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ಹೇಳಿದರು.
ಮೇ.31 ರಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗಲಿದ್ದೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಮೂಲಕ ಹೇಳಿಕೆ ನೀಡಿದ್ದು, ಏರ್ ಪೋರ್ಟ್ ನಲ್ಲಿ ನಿಗಾ ವಹಿಸಲಾಗಿದೆ.