ಬೆಂಗಳೂರು: ರಂಗಭೂಮಿ ಮತ್ತು ಚಿತ್ರರಂಗ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ಪ್ರಕಾಶ್ ಹೆಗ್ಗೋಡು(58) ಮಾರ್ಚ್ 30ರಂದು ತಡರಾತ್ರಿ ನಿಧನರಾಗಿದ್ದಾರೆ.
ಯೇಸ್ ಪ್ರಕಾಶ್ ಎಂದು ಕರೆಯಲ್ಪಡುತ್ತಿದ್ದ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪುರುಪ್ಪೆಮನೆಯ ಅವರ ಸ್ವಗೃಹದಲ್ಲಿ ಮಾರ್ಚ್ 31 ರಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
‘ರಾಜಾಹುಲಿ’, ‘ಸಂತ’, ‘ಕಲಾಸಿಪಾಳ್ಯ’, ‘ಕಲ್ಪನಾ 2’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ಪ್ರಕಾಶ್ ರಂಗಭೂಮಿಯಲ್ಲಿಯೂ ಸಕ್ರಿಯರಾಗಿದ್ದರು. ಸಾಮಾಜಿಕ ಕಾಳಜಿಯ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದ್ದರು. ಪ್ರಕಾಶ್ ಅವರಲ್ಲಿ ನಿಧನಕ್ಕೆ ಚಿತ್ರರಂಗ ಹಾಗೂ ರಂಗಭೂಮಿ ಕಲಾವಿದರು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.