ಬೆಂಗಳೂರು: ನಟ, ನಿರ್ದೇಶಕ ಪ್ರಕಾಶ್ ರಾಜ್ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಾಹಿನಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಯೂಟ್ಯೂಬ್ ವಾಹಿನಿಯೊಂದರಲ್ಲಿ ಪ್ರಕಾಶ್ ರಾಜ್ ಅವರಿಗೆ ಜೀವ ಬೆದರಿಕೆ ಹಾಕುವಂತಹ ವಿಡಿಯೋಗಳನ್ನು ಅಪ್ ಲೋಡ್ ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರಕಾಶ್ ರಾಜ್ ದೂರು ನೀಡಿದ್ದರು.
ಇದೀಗ ಯೂಟ್ಯೂಬ್ ವಾಹಿನಿ ವಿರುದ್ಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 506, 504, 505ರ ಅಡಿ ಮೊಕದ್ದಮೆ ದಾಖಲಾಗಿದೆ.
ಆಗಸ್ಟ್ 14ರಂದು ಯೂಟ್ಯೂಬ್ ಚಾನಲ್ ನಲ್ಲಿ ಜೀವ ಬೆದರಿಕೆ ಹಾಕುವ ಸಂದೇಶದ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಎರಡು ವಿಡಿಯೋಗಳ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪ್ರಕಾಶ್ ರಾಜ್ ದೂರು ನೀಡಿದ್ದರು.