ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾರ್ಯಕಾರಣಿಯಲ್ಲಿ ಚರ್ಚೆ ನಡೆಸಲಾಗಿಲ್ಲ. ಇದರ ಬಗ್ಗೆ ವರಿಷ್ಠರೊಂದಿಗೆ ಮುಖ್ಯಮಂತ್ರಿಯವರು ಚರ್ಚೆ ನಡೆಸುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹಲವು ಬಾರಿ ನಾನು ಹೇಳಿದ್ದೇನೆ. 2023 ರ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಅಂಶಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿದ್ದಕ್ಕೆ ಸಿಎಂಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಪರಿಷತ್ ನಲ್ಲಿಯೂ ಮತಾಂತರ ನಿಷೇಧ ಕಾಯ್ದೆ ಮಂಡಿಸಲಾಗುವುದು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಂಪುಟ ವಿಸ್ತರಣೆಯ ಕುರಿತಾಗಿ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆ ನಡೆದಿಲ್ಲ. ವರಿಷ್ಠರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಅದರ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.