alex Certify ಲೋಕಸಭೆ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 5ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ ಚುನಾವಣೆ ಮುಗಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚು ಸ್ಥಾನ ಗೆಲ್ಲದಿದ್ದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನವರು 20 ಕ್ಷೇತ್ರ ಗೆಲ್ಲುತ್ತೇವೆ ಎಂದು ಯಾಕೆ ಹೇಳುತ್ತಿದ್ದಾರೆ ಗೊತ್ತಿಲ್ಲ. ಐದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಅವರಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಕಚ್ಚಾಟ ನಡೆಯುತ್ತಿದೆ. ಹೆಚ್ಚಿನ ಉಪಮುಖ್ಯಮಂತ್ರಿಗಳನ್ನು ಮಾಡಿ ಡಿ.ಕೆ. ಶಿವಕುಮಾರ್ ಮೂಲೆ ಗುಂಪು ಮಾಡುವ ತಂತ್ರ ನಡೆದಿದೆ. ಕಾನೂನಾತ್ಮಕವಾಗಿಯೂ ತೊಂದರೆ ಕೊಡುವ ಪ್ಲಾನ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...