
ಹುಬ್ಬಳ್ಳಿ: ಪಕ್ಷದ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿಯೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ ಅವರಿಂದ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆಯೂ ಪಕ್ಷದ ಮುಂದೆ ಇಲ್ಲ. ಮುಖ್ಯಮಂತ್ರಿಗಳು ಸಮರ್ಥರಾಗಿ, ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಾವಣೆ ಮಾಡುವಂತಹ ಯಾವುದೇ ವಿಷಯವಿಲ್ಲ. ಹೈಕಮಾಂಡ್ ನಿಂದಲೂ ಅವರಿಗೆ ಯಾವುದೇ ರೀತಿಯ ಸೂಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.