alex Certify ಸಿದ್ಧರಾಮಯ್ಯ, ಹೆಚ್.ಕೆ. ಪಾಟೀಲ್ ಔಟ್ ಡೇಟೆಡ್: ಪ್ರಹ್ಲಾದ್ ಜೋಶಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ, ಹೆಚ್.ಕೆ. ಪಾಟೀಲ್ ಔಟ್ ಡೇಟೆಡ್: ಪ್ರಹ್ಲಾದ್ ಜೋಶಿ ತಿರುಗೇಟು

ಹುಬ್ಬಳ್ಳಿ: ಕಳಸ ಬಂಡೂರಿ ಡಿಪಿಆರ್ ನಲ್ಲಿ ದಿನಾಂಕ ನಮೂದು ಆಗಿಲ್ಲ ಎಂಬ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಹೆಚ್.ಕೆ. ಪಾಟೀಲ್ ಅವರು ಯಾಕೆ ಡೇಟ್ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ ಗೊತ್ತಿಲ್ಲ. ರಾಜಕಾರಣಕ್ಕೋ ಅಥವಾ ಮೂರ್ಖತನಕ್ಕೆ ಹೇಳಿದ್ದಾರೋ ಗೊತ್ತಿಲ್ಲ. ಸೋನಿಯಾ ಗಾಂಧಿ ಹನಿ ನೀರೂ ಕೊಡುವುದಿಲ್ಲ ಎಂದು ಹೇಳಿದ್ದರು. ವಿಸ್ತೃತ ವರದಿಯಲ್ಲಿ ಡೇಟ್ ಇದೆ. ನಾನು ತೋರಿಸುತ್ತೇನೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಮತ್ತು ಹೆಚ್.ಕೆ. ಪಾಟೀಲ್ ಔಟ್ ಡೇಟೆಡ್ ಆಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿಯೇ ಫಾರೆಸ್ಟ್ ಕ್ಲಿಯರೆನ್ಸ್ ಆಗಿ ಬರಲಿದೆ. ನಮ್ಮ ನ್ಯಾಯಯುತ ಬೇಡಿಕೆ ಈಡೇರಿದೆ. ಇನ್ನು ಎರಡು ತಿಂಗಳಲ್ಲಿ ಯೋಜನೆಗೆ ಶಂಕುಸ್ಥಾಪನೆ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...