ಹುಬ್ಬಳ್ಳಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ 98ನೇ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ವಚ್ಛತಾ ಅಭಿಯಾನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಮೆರಿಕಕ್ಕೆ ಹೋಗಲಿದ್ದಾರೆ. ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಸುಳ್ಳು ಸುದ್ದಿಗಳನ್ನು ಹಬ್ಬಿಸಬಾರದು. ಇದನ್ನೆಲ್ಲ ಬಿಡಬೇಕು ಎಂದು ಹೇಳಿದ್ದಾರೆ.