
ಮೈಸೂರು: ನ್ಯೂನತೆಗಳಿದ್ದರೆ ಕೃಷಿ ಕಾಯ್ದೆ ತಿದ್ದುಪಡಿಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಕೃಷಿ ತಿದ್ದುಪಡಿ ಕಾಯ್ದೆಯನ್ನು ಪಡೆಯುವುದು ಸರಿಯಲ್ಲ. ಕಾಯ್ದೆಯಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸಿ ತಿದ್ದುಪಡಿ ಮಾಡಲು ಸರ್ಕಾರ ಮುಕ್ತವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಜುಲೈ 19 ರಿಂದ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಎಂಟು ಪ್ರಮುಖ ಮಸೂದೆಗಳನ್ನು ಮಂಡಿಸಲಾಗುವುದು. ಕಳೆದ ಅಧಿವೇಶನದಲ್ಲಿ ಮಂಡನೆಯಾದ ಬಿಲ್ ಗಳಿಗೆ ಒಪ್ಪಿಗೆ ಪಡೆಯಲಾಗುವುದು ಎಂದರು.