ಹುಬ್ಬಳ್ಳಿ: ರಾಜ್ಯ ಸರ್ಕಾರ ಕೇಳಿದಷ್ಟು ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಕೇಳಿದಷ್ಟು ಅಕ್ಕಿ ಕೊಡಲು ಸಿದ್ಧವಿರುವ ಬಗ್ಗೆ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ತಿಳಿಸಲಾಗಿದೆ. ಹೀಗಿದ್ದರೂ ರಾಜ್ಯ ಸರ್ಕಾರದಿಂದ ಇದುವರೆಗೆ ಯಾವುದೇ ಬೇಡಿಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.
ಪ್ರತಿ ಕೆಜಿ ಅಕ್ಕಿಗೆ 32 ರೂಪಾಯಿ ಇದ್ದ ಅಕ್ಕಿ ದರವನ್ನು 22.5 ರೂ.ಗೆ ಕಡಿತಗೊಳಿಸಲಾಗಿದೆ. ಈ ದರದಲ್ಲಿ ರಾಜ್ಯ ಸರ್ಕಾರ ಖರೀದಿಸಿ ಪಡಿತರ ಚೀಟಿದಾರರಿಗೆ ವಿತರಿಸಿದಲ್ಲಿ ರಾಜ್ಯಕ್ಕೆ ಪ್ರತಿ ತಿಂಗಳು 190 ಕೋಟಿ ರೂಪಾಯಿ ಉಳಿತಾಯವಾಗುತ್ತದೆ ಎಂದು ಹೇಳಿದ್ದಾರೆ.
ಈಗಾಗಲೇ ಎರಡು ಬಾರಿ ಆಹಾರ ಸಚಿವ ಮುನಿಯಪ್ಪ ಭೇಟಿಯಾಗಿ ಮಾತನಾಡಿದ್ದಾರೆ. ನಂತರ ಯಾವುದೇ ಪ್ರಕ್ರಿಯೆ ಆಗಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನರಿಗೆ ಅಕ್ಕಿ ವಿತರಿಸುವ ಕಾಳಜಿ ಇದ್ದಲ್ಲಿ ಅಕ್ಕಿ ಕೇಂದ್ರದಿಂದ ಅಕ್ಕಿ ಖರೀದಿಸಿ ವಿತರಿಸಬಹುದು ಎಂದು ಹೇಳಿದ್ದಾರೆ.