ಹುಬ್ಬಳ್ಳಿ: ವಕ್ಫ್ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರನ್ನು ಒಕ್ಕಲಿಬ್ಬಿಸುತ್ತಿದೆ. ಮುಂದೆ ಅಧಿಕಾರಕ್ಕೆ ಬರೋಲ್ಲ ಎನ್ನುವ ಕಾರಣಕ್ಕೆ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲ್ಲಿ ಸಾಧ್ಯವೋ ಅಲ್ಲಿ ವಕ್ಪ್ ಆಸ್ತಿ ಎಂದು ನಮೂದು ಮಾಡುತ್ತಿದ್ದಾರೆ. ಇದು ಮುಸ್ಲಿಂ ಬಾಹುಳ್ಯ ಸ್ಥಾಪಿಸುವ ಹುನ್ನಾರವಾಗಿದೆ ಎಂದು ಟೀಕಿಸಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ಒಬ್ಬ ಮುಸ್ಲಿಂ ಕೂಡ ಇಲ್ಲ. ಅಲ್ಲಿ ದೇವಾಲಯದ ಆಸ್ತಿ ವಕ್ಫ್ ಆಸ್ತಿಯಾಗಿದೆ. ದೇವಾಲಯ ಮಂಡಳಿಗೆ ಸೇರಿದ್ದು ಎಂದಿದ್ದಾರೆ. ಅಲ್ಲಿಯೂ ಮುಸ್ಲಿಮರನ್ನು ತುಂಬುವ ಕೆಲಸ ನಡೆಯುತ್ತಿದೆ. ಕಾಂಗ್ರೆಸ್ ನವರು ಸುಳ್ಳು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದವರು. ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರೈತರ ಹಿತಾಸಕ್ತಿಗಿಂತ ವೋಟ್ ಬ್ಯಾಂಕ್ ರಾಜಕಾರಣ ಜಾಸ್ತಿಯಾಗಿದೆ. ವಕ್ಫ್ ಅದಾಲತ್ ಮಾಡಿ ವಕ್ಪ್ ಹೆಸರಿಗೆ ಆಸ್ತಿ ವರ್ಗಾವಣೆ ಮಾಡಿಸುತ್ತೇನೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅದಾಲತ್ ಮಾಡಿ ವರ್ಗಾವಣೆ ಮಾಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಸಚಿವ ಜಮೀರ್ ಹೇಳಿಕೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡುತ್ತಿಲ್ಲ. ಬಡ ರೈತರ ಜಮೀನು ಕಬಳಿಸುವ ಹುನ್ನಾರ ಸಿಎಂ ಸೂಚನೆ ಎನ್ನುತ್ತಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದುವರೆಗೂ ಸ್ಪಷ್ಟೀಕರಣ ಕೊಟ್ಟಿಲ್ಲ. ಕಾಂಗ್ರೆಸ್ ಎಲ್ಲಿ ಇದೆಯೋ ಅಲ್ಲಿ ಎಲ್ಲಾ ಕಡೆ ಇದು ಆರಂಭವಾಗುತ್ತದೆ. ಕಾಂಗ್ರೆಸ್ ಪಕ್ಷ ಯಾವಾಗಲೂ ಒಡೆದಾಳುವ ನೀತಿ ಅನುಸರಿಸುತ್ತದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜೋಶಿ ಹೇಳಿದ್ದಾರೆ.