ನವದೆಹಲಿ: ರಾಜ್ಯದ ಬೆಟ್ಟ ಕುರುಬ ಜನಾಂಗ ಸೇರಿದಂತೆ 12 ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಕಳೆದ 30 ವರ್ಷಗಳಿಂದ ಬೆಟ್ಟ ಕುರುಬರು(ಕಾಡು ಕುರುಬರು) ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಹೋರಾಟ ಮಾಡುತ್ತಿದ್ದು, ಕರ್ನಾಟಕ ಸರ್ಕಾರ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿದ್ದು, ಕಾರಣಾಂತರದಿಂದ ಅವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ಜಾತಿಗೆ ಸೇರಿಸಬೇಕೆಂಬ ಅವರ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ. ಕರ್ನಾಟಕದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು 12 ಜಾತಿಗಳನ್ನು ಎಸ್ಟಿಗೆ ಸೇರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.