ಉಡುಪಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಲು ಮುಂದಾಗಿದ್ದರು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಆರೋಪಿಸಿದ್ದಾರೆ.
ಕೃಷ್ಣಮಠದಲ್ಲಿ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮದ್ವರಾಜ್, ಕೃಷ್ಣಮಠ ಸ್ವಾಧೀನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದರು. ವಿಷಯ ಗೊತ್ತಾಗುತ್ತಿದ್ದಂತೆ ನಾನೇ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ವಿರೋಧಿಸಿದ್ದೆ. ಮಠ ವಶಪಡಿಸಿಕೊಂಡರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದೆ ಎಂದಿದ್ದಾರೆ.
ಪರೀಕ್ಷಾ ವರದಿ ಬಳಿಕ ನೆಮ್ಮದಿಯ ನಿಟ್ಟುಸಿರುಬಿಟ್ಟ ನಟಿ ಕರೀನಾ ಕಪೂರ್….!
ಇಲ್ಲಿಯವರೆಗೆ ಈ ವಿಚಾರ ನನ್ನೊಳಗೇ ಇತ್ತು. ಆದರೆ ಇಂದು ಈ ವಿಷಯ ಹೇಳಬೇಕಾಗಿದೆ. ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಮಠಕ್ಕೆ 800 ವರ್ಷಗಳ ಇತಿಹಾಸವಿದೆ. ದೇಶ ವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಮಠವನ್ನು ನಮ್ಮದೇ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಚಿಂತನೆ ನಡೆಸಿದ್ದು ನನಗೂ ಆಘಾತವಾಗಿತ್ತು. ಕೃಷ್ಣಮಠಕ್ಕೆ ತೊಂದರೆಯಾದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದೆ ಎಂದಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರ ಈ ಹೇಳಿಕೆ ಇದೀಗ ಕಾಂಗ್ರೆಸ್ ನಾಯಕರಲ್ಲಿ ಚರ್ಚೆಗೆ ಕಾರಣವಾಗಿದ್ದು, ಮಾಜಿ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.