ಚಿಕ್ಕಮಗಳೂರು: ದತ್ತಪೀಠ ಮತ್ತು ನಾಗೇನಹಳ್ಳಿಯ ದರ್ಗಾ ವಿಚಾರವಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರಿಗೆ ಜನವರಿ 5ರವರೆಗೆ ಚಿಕ್ಕಮಗಳೂರಿಗೆ ಪ್ರವೇಶ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಜನವರಿ 5ರವರೆಗೆ ಆದೇಶ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಗಂಗಾಧರ ಕುಲಕರ್ಣಿ ಅವರು ಜಿಲ್ಲೆಗೆ ಪ್ರವೇಶಿಸುವಂತಿಲ್ಲ. ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಚಿಕ್ಕಮಗಳೂರಿಗೆ ಪ್ರವೇಶಿಸದಂತೆ ಆದೇಶ ಹೊರಡಿಸಿದ್ದಾರೆ.