ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ನನಗೆ ಫೋನ್ ಕರೆ ಮಾಡಿ ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಬೆದರಿಕೆ ಹಾಕುತ್ತಿದ್ದಾರೆ. ನಾನು ಶರಣ ಸಂಸ್ಕೃತಿಯಂತೆ ಮದುವೆಯಾಗಿದ್ದೇನೆ. ಸಮುದಾಯಕ್ಕಾಗಿ ಹೋರಾಟ ನಡೆಸಿದ್ದೇನೆ ಎಂದು ಹೇಳಿದರು.
ನನ್ನನ್ನು ಹೆದರಿಸಿ, ಬೆದರಿಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಆದರೆ ಈ ಬೆದರಿಕೆಗಳಿಗೆ ನಾನು ಜಗ್ಗುವುದಿಲ್ಲ ಎಂದು ಹೇಳಿದ್ದಾರೆ. ಜೀವ ಬೆದರಿಕೆ ಹಿನ್ನೆಲೆಯಲ್ಲಿ ಪ್ರಣವಾನಂದ ಸ್ವಾಮೀಜಿ ಇಂದು ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಲು ಮುಂದಾಗಿದ್ದಾರೆ.