2010ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ‘ಪೊರ್ಕಿ’ ಸಿನಿಮಾನಲ್ಲಿ ಅಭಿನಯಿಸೋ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಪ್ರಣಿತಾ ಸುಭಾಷ್ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ.
ಪ್ರಣಿತಾ ಸುಭಾಷ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ಟಿವ್ ಆಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.
ಇದೀಗ ಪ್ರಣಿತಾ ಸುಭಾಷ್ ಇತ್ತೀಚೆಗೆ ತೆಗೆಸಿರುವ ತಮ್ಮ ಲೇಟೆಸ್ಟ್ ಫೋಟೋಗಳನ್ನು instagram ಖಾತೆಯಲ್ಲಿ ಹಂಚಿಕೊಂಡಿದ್ದು, ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಪೋಸ್ಟ್ ಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳು ಬಂದಿವೆ. ಸಿನಿಮಾ ವಿಚಾರಕ್ಕೆ ಬಂದರೆ ಪ್ರಣಿತಾ ಸುಭಾಷ್ ಇತ್ತೀಚಿಗೆ ‘ರಾಮನ ಅವತಾರ’ ಚಿತ್ರದಲ್ಲಿ ನಟಿಸಿದ್ದು ‘ದಿಲೀಪ್ 148’ ಎಂಬ ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿದ್ದಾರೆ.