alex Certify ಪ್ರತಾಪ್ ಸಿಂಹ ಯಾವ ಹಿನ್ನಲೆಯಲ್ಲಿ ಪಾಸ್ ಕೊಟ್ಟಿದ್ದರು ಎಂಬ ಬಗ್ಗೆ ತನಿಖೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಾಪ್ ಸಿಂಹ ಯಾವ ಹಿನ್ನಲೆಯಲ್ಲಿ ಪಾಸ್ ಕೊಟ್ಟಿದ್ದರು ಎಂಬ ಬಗ್ಗೆ ತನಿಖೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದು ಲೋಕಸಭೆಗೆ ನುಗ್ಗಿದ ಪ್ರಕರಣದಲ್ಲಿ ಯಾವ ಹಿನ್ನೆಲೆಯಲ್ಲಿ ಅವರು ಪಾಸ್ ಕೊಟ್ಟಿದ್ದರು ಎಂಬ ಬಗ್ಗೆ ತನಿಖೆಯಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ.  ಕ್ಷೇತ್ರದ ಜನರು ಬಂದಾಗ ಪಾಸ್ ಕೊಡುವುದು ಸಹಜ. ಪ್ರತಾಪ ಸಿಂಹ ಪಾಸ್ ಕೊಟ್ಟ ವಿಚಾರ ತನಿಖೆಗೆ ಒಳಪಡಲಿದೆ. ಮೂರು ಬಾರಿ ಪಾಸ್ ಪಡೆದಿರುವ ಬಗ್ಗೆ ಗೊತ್ತಿಲ್ಲ. ಮೈಸೂರಿನವರು ಎನ್ನುವ ಕಾರಣಕ್ಕೆ ಪಾಸ್ ಕೊಟ್ಟೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದವರನ್ನು ಅಮಾನತು ಮಾಡುವುದಿಲ್ಲ. ಈ ಹಿಂದೆ ಬಿತ್ತಿ ಪ್ರದರ್ಶನ, ಪ್ರತಿಭಟನೆ ನಡೆಸಿದ ಬಗ್ಗೆ ಬಿಎಸ್ಇ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಕ್ಕೆ ಸರ್ವ ಪಕ್ಷಗಳು ಒಪ್ಪಿದ್ದವು. ಅದರಂತೆ ಅವರ ಮೇಲೆ ಕ್ರಮ ಜರುಗಿಸುವ ಕೆಲಸವಾಗಿದೆ ಎಂದು ಹೇಳಿದ್ದಾರೆ.

ನಿನ್ನೆ ನಡೆದ ಘಟನೆ ವಿಷಾದನೀಯ, ಖಂಡನೀಯ. ಘಟನೆ ನಂತರ ಲೋಕಸಭೆ ಸ್ಪೀಕರ್, ಸಭಾ ನಾಯಕರು ಸಭೆ ನಡೆಸಿ ಸಂಸತ್ ನಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಘಟನೆಯಿಂದ ಪಾಠ ಕಲಿತುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಎಲ್ಲರ ಸಲಹೆ ಪಡೆದು ಸಂಸತ್ ರಕ್ಷಣೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಇಂತಹ ಘಟನೆಗಳಲ್ಲಿ ಸ್ಪೀಕರ್ ಈ ಹಿಂದೆ ಕೈಗೊಂಡ ಕ್ರಮಗಳಂತೆ ಈ ಬಾರಿಯೂ ಕ್ರಮ ಕೈಗೊಳ್ಳಲಾಗಿದೆ. ಆಯುಧ ಸೇರಿದಂತೆ ಇತರೆ ವಸ್ತು ಪಡೆದು ಗ್ಯಾಲರಿಗೆ ಬರುವುದು ಬೇಡ. ಇಂತಹ ಘಟನೆಯಲ್ಲಿ ಅಂದಿನ ಸ್ಪೀಕರ್ ಕೈಗೊಂಡ ಪರಂಪರೆ ಪರಿಶೀಲಿಸಿ ಅದರಂತೆ ಈ ಬಾರಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗೃಹ ಸಚಿವಾಲಯಕ್ಕೆ ಪತ್ರ ಬರೆದು ಉನ್ನತ ಮಟ್ಟದ ತನಿಖೆಗೆ ಸ್ಪೀಕರ್ ಆದೇಶ ನೀಡಿದ್ದಾರೆ. ಸದನದ ಮುಖ್ಯಸ್ಥರಾಗಿ ಭದ್ರತೆ ವಿಚಾರದಲ್ಲಿ ಸ್ಪೀಕರ್ ನಿರ್ಣಯವೇ ಅಂತಿಮ. ಇದರಲ್ಲಿ ಸರ್ಕಾರದ ಪಾತ್ರ ಇರುವುದಿಲ್ಲ. ತನಿಖೆಗೆ ಸೂಚನೆ ನೀಡಿ ಸದನ ನಡೆಸಿದ್ದಾರೆ. ಇಂದು ಕಲಾಪ ಆರಂಭವಾದಾಗ ವಿರೋಧ ಪಕ್ಷಗಳು ಗಲಾಟೆ ಆರಂಭಿಸಿದ್ದವು ಎಂದು ದೂರಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...