ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಕ್ಕೆ ಎಫ್ ಐ ಆರ್ ದಾಖಲಾಗಿದೆ. ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವಾಗಲೇ ಈಗ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪುವ ಆತಂಕವು ಎದುರಾಗಿದೆ.
ಭದ್ರತಾ ಲೋಪ ಪ್ರಕರಣದ ಬಳಿಕ ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಸೆಳೆಯಲು ಯತ್ನಿಸಿದೆ. ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ವಿಚಾರ ಮಾತುಕತೆಯಲ್ಲಿರುವಾಗಲೇ ಮೈಸೂರು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಟ್ಟಿದೆ.
ಪ್ರತಾಪ್ ಸಿಂಹ ಎರಡು ಬಾರಿ ಮೈಸೂರು ಸಂಸದರಾಗಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜೀವನ ಚರಿತ್ರೆ ಪುಸ್ತಕ ಬರೆಯುವ ಮೂಲಕ ಹೈಕಮಾಂಡ್ ಆಪ್ತ ಪರ್ತಕರ್ತರಾಗಿದ್ದಾರೆ. ಆದರೆ ಈ ಬಾರಿ ಸಂಸತ್ ಭದ್ರತಾ ಲೋಪ ಪ್ರಕರಣ ಘಟನೆಯಿಂದಾಗಿ ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಮಧ್ಯೆ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.