ಮೈಸೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲುತೂರಾಟ, ಪೆಟ್ರೋಲ್ ಬಾಂಬ್ ಎಸೆದು ಅಂಗಡಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ಕೃತ್ಯಕ್ಕೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಸರ್ಕಾರ ಮೊದಲು ಮುಸ್ಲಿಂರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಗಳನ್ನು ವಶಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ನಾವೂ ಕೂಡ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಗಣೇಶ ಮೆರವಣಿಗೆ ವೇಳೆ ನಾವೂ ಕೂಡ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿದುಕೊಳ್ಳಬೇಕಾಗುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆ. ಬೇರೆ ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಗಣೇಶ ಮೆರವಣಿಗೆ ಮಾಡಲಾಗುತ್ತಿದೆ. ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಹೇರಬೇಕು. ನಿಯಂತ್ರಣ ಹೇರದಿದ್ದರೆ ನಮ್ಮ ರಕ್ಷಣೆ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.