ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಯತೀಂದ್ರ ಸಿದ್ದರಾಮಯ್ಯ ಎದುರಾಳಿಯಾದರೆ ಒಳ್ಳೆಯದೇ ಎಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಯತೀಂದ್ರ ಸಿದ್ದರಾಮಯ್ಯ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಿದರೆ ಒಳ್ಳೆಯದೇ. ಹಾಗಾದರೆ ಪತ್ರಕರ್ತ-ಸಿಎಂ ಪುತ್ರನ ನಡುವೆ ಫೈಟ್ ನಡೆಯುತ್ತೆ. ನಾನು ಯಾವತ್ತೂ ಎದುರಾಳಿ ಬಗ್ಗೆ ತಲೆಕೆಡಿಸಿಕೊಂಡವನಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿ ಹೆಸರು ಕೂಡ ನಡೆಯಲ್ಲ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಕಾಂಗ್ರೆಸ್ ಬಂದಿದೆ. ಇನ್ನು ನಮ್ಮಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಮೇಲೆ ಎರಡೂ ಪಕ್ಷದ ನಾಯಕ ಆಶಿರ್ವಾದ ಇದೆ ಎಂದು ಹೇಳಿದ್ದಾರೆ.