alex Certify ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಿದ್ರೆ ಒಡೆದು ಹಾಕ್ತೇವೆ: ಪ್ರತಾಪ್ ಸಿಂಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಿದ್ರೆ ಒಡೆದು ಹಾಕ್ತೇವೆ: ಪ್ರತಾಪ್ ಸಿಂಹ

ಮೈಸೂರು: ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.

ಜಾಲತಾಣದಲ್ಲಿ ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ನಿನ್ನೆ ‘ಟಿಪ್ಪು ನಿಜ ಕನಸುಗಳು’ ನಾಟಕದ ವೇಳೆ ಪ್ರತಾಪ ಸಿಂಹ ಬಾಷಣ ಮಾಡಿದ್ದರು. ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನು ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್ ನಿಲ್ದಾಣಗಳ ತೆರವಿಗೆ ಹೇಳಿದ್ದೇನೆ. ಮೂರ್ನಾಲ್ಕು ದಿನದಲ್ಲಿ ಗುಂಬಜ್ ತೆರವುಗೊಳಿಸಲು ಇಂಜಿನಿಯರ್ ಗಳಿಗೆ ಸೂಚನೆ ನೀಡಿದ್ದೇನೆ. ಇಲ್ಲವಾದರೆ ನಾವೇ ಜೆಸಿಬಿ ತಂದು ಗುಂಬಜ್ ತೆರವು ಮಾಡುತ್ತೇವೆ  ಎಂದು ಮೈಸೂರು ಸಂಸದ ಪ್ರತಾಪ ಸಿಂಹ ನೀಡಿದ ಹೇಳಿಕೆ ಜಾಲತಾಣದಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...