ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಸಹೋದರನ 150 ಅಕ್ರಮ ಮರ ಕಡಿದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ .
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಿ, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.
ವೃಕ್ಷ ಸಂರಕ್ಷಣಾ ಕಾಯಿದೆ1976 ರ ಪ್ರಕಾರ ಯಾವುದೇ ಜಾಗದಲ್ಲಿ ಮರಗಳನ್ನು ಕಡಿಯಬೇಕೆಂದರೂ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೌಡನಹಳ್ಳಿ ಗ್ರಾಮದಲ್ಲಿ ಮರ ಕಡಿಯುವುದಕ್ಕೆ ಅನುಮತಿ ಪಡೆದಿರಲಿಲ್ಲ, ಆದ್ದರಿಂದ ಅರಣ್ಯ ಜಾಗೃತ ದಳ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಸೂಚಿಸಿದ್ದಾರೆ.
ಕಾಂಗ್ರೆಸ್ ಆರೋಪ
ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ, ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಈಶ್ವರ್ ಕಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ? ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಿಸಿದೆ.