ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯನ್ನು ದಕ್ಷಿಣ ಕನ್ನಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿದ ಪೊಲೀಸರು ಖಚಿತ ಮಾಹಿತಿ ಕಲೆ ಹಾಕಿ ಬೆಂಗಳೂರಿಗೆ ಬಂದು ಹುಡುಕಾಟ ನಡೆಸಿ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪೂರ್ವ ವಿಭಾಗದಲ್ಲಿ ಮಧ್ಯರಾತ್ರಿ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಜಾಕಿರ್ ಮತ್ತು ಶಫೀಕ್ ಬಳಿಕ ಮತ್ತೊಬ್ಬನನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಹೇಳಲಾಗಿದೆ.