
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಾರೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಬಿದ್(22), ನೌಫಾಲ್(28) ಅವರನ್ನು ಬಂಧಿಸಿದ್ದಾರೆ. ಬೆಳ್ಳಾರೆಯ ಗೌರಿಹೊಳೆ ನಿವಾಸಿ ಮೊಹಮ್ಮದ್ ಅವರ ಮಗ ನೌಫಾಲ್, ನಾವೂರು ನಿವಾಸಿ ಯಾಕೂಬ್ ಪುತ್ರ ಅಬಿದ್ ಬಂಧಿತ ಆರೋಪಿಗಳು. ಪ್ರಮುಖ ಆರೋಪಿಗಳಿಗೆ ನೆರವು ನೀಡಿದ ಆರೋಪದಡಿ ಇವರನ್ನು ಬಂಧಿಸಲಾಗಿದೆ.
ಈ ಹಿಂದೆ ಶಫೀಕ್, ಜಾಕೀರ್, ಸದ್ದಾಂ, ಹ್ಯಾರಿಸ್ ಅವರನ್ನು ಬಂಧಿಸಲಾಗಿತ್ತು. ಈಗ ಮತ್ತಿಬ್ಬರು ಆರೋಪಿಗಳ ಬಂಧನದೊಂದಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇದುವರೆಗೆ ಆರು ಆರೋಪಿಗಳ ಬಂಧನವಾಗಿದೆ. ಹತ್ಯೆಯಲ್ಲಿ ನೇರ ಭಾಗಿಯಾದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ.