
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶಿಯಾಬ್, ರಿಯಾಜ್ ಮತ್ತು ಬಶೀರ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಈ ಮೂವರನ್ನು ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ್ದು ಗೌಪ್ಯ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26 ರಂದು ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆಗೈದ ಪ್ರಮುಖ ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು. ಇವತ್ತು ಮಧ್ಯಾಹ್ನ 12 ಗಂಟೆಗೆ ಪೊಲೀಸರು ಸುದ್ದಿಗೋಷ್ಠಿ ನಡೆಸಿ ಬಂಧನದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗಿದೆ.