
ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿ ಆದೇಶಿಸಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕೆ.ಇಸ್ಮಾಯಿಲ್ ಶಫಿ, ಕೆ. ಮೊಹಮ್ಮದ್ ಇಕ್ಬಾಲ್ ಮತ್ತು ಎಂ.ಶಾಹೀದ್ ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ತಿರಸ್ಕರಿಸಿ ಆದೇಶಿಸಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಸಕ್ರಿಯ ಪಾತ್ರ ವಹಿಸುವ ಬಗ್ಗೆ ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಹಾಜರಲಿಲ್ಲ, ಆದರೆ ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸುವ ಪಿತೂರಿ ಸಭೆಯಲ್ಲಿ ಭಾಗಹಿಸಿ ಚರ್ಚಿಸಿದ್ದರು ಎಂದು ಅಭಿಪ್ರಾಯಪಟ್ಟಿದೆ.