
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು 32 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಪುತ್ತೂರು, ಸುಳ್ಯದ 32 ಕಡೆಗಳಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಮನೆಗಳು, ಕೆಲವು ಖಾಸಗಿ ಕಟ್ಟಡಗಳು ಸೇರಿದಂತೆ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಲಾಗಿದೆ. ರಾಷ್ಟ್ರೀಯ ತನಿಕಾ ಸಂಸ್ಥೆ ಅಧಿಕಾರಿಗಳಿಗೆ ರಾಜ್ಯದ ಪೊಲೀಸರು ಸಾಥ್ ನೀಡಿದ್ದಾರೆ.