
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಮಂಗಳೂರು ಪೊಲೀಸರು ಆರೋಪಿಗಳಾದ ಸದ್ದಾಂ ಮತ್ತು ಹ್ಯಾರೀಸ್ ಅವರನ್ನು ಬಂಧಿಸಿದ್ದಾರೆ. ಪ್ರವೀಣ್ ಕೊಲೆ ಸಂಚಿನಲ್ಲಿ ಇವರು ಭಾಗಿಯಾಗಿದ್ದರು. ಪ್ರವೀಣ್ ನೆಟ್ಟಾರು ಕೊಲ್ಲಲು ಹ್ಯಾರಿಸ್ ತಂಡ ವಿಫಲವಾಗಿತ್ತು. ಸದ್ದಾಂ ಚಿಕನ್ ಅಂಗಡಿಯಲ್ಲಿ ಕೊಲೆಗೆ ಸಂಚು ರೂಪಿಸಲಾಗಿತ್ತು. ಎನ್ನಲಾಗಿದ್ದು, ಇದರೊಂದಿಗೆ ಪ್ರವೀಣ್ ಕೊಲೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.