
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡೆನ್ ಮತ್ತು ಉಪಾಧ್ಯಕ್ಷರಾಗಿ ಕಮಲಾ ದೇವಿ ಹ್ಯಾರಿಸ್ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಅಧಿಕಾರ ಉಳಿಸಿಕೊಳ್ಳಲು ಕೊನೆಕ್ಷಣದವರೆಗೂ ಇನ್ನಿಲ್ಲದ ಕಸರತ್ತು ನಡೆಸಿದ್ದ ಡೊನಾಲ್ಡ್ ಟ್ರಂಪ್ ಅಧಿಕಾರದಿಂದ ನಿರ್ಗಮಿಸುವ ಹೊತ್ತಲ್ಲಿ ವಿದಾಯದ ಭಾಷಣ ಮಾಡಿದ್ದಾರೆ. ಒಂದು ವಾರದಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಅವರ ವಿದಾಯ ಭಾಷಣದ ವಿಡಿಯೋವನ್ನು ಶ್ವೇತಭವನ ಬಿಡುಗಡೆ ಮಾಡಿದ್ದು, ಜೋ ಬೈಡೆನ್ ಸರ್ಕಾರದ ಯಶಸ್ಸಿಗೆ ಪ್ರಾರ್ಥಿಸುತ್ತೇನೆ ಎಂದು ಟ್ರಂಪ್ ತಿಳಿಸಿದ್ದಾರೆ. ಜನವರಿ 6 ರಂದು ಕ್ಯಾಪಿಟಲ್ ಕಟ್ಟಡದಲ್ಲಿ ಟ್ರಂಪ್ ಬೆಂಬಲಿಗರು ಗಲಭೆ ನಡೆಸಿದ್ದರು. ಈ ಕಾರಣದಿಂದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.