ಗುಜರಾತ್ ನಲ್ಲಿ ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕಿಯನ್ನು ಸೋಮವಾರ ರಾತ್ರಿ ಯೋಧರು ಹಾಗೂ ಎನ್ ಡಿ ಆರ್ ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ.
ಗುಜರಾತ್ ನ ದೇವಭೂಮಿ ದ್ವಾರಕಾ ಜಿಲ್ಲೆಯ ರಾನ್ ಗ್ರಾಮದಲ್ಲಿ ತೆರೆದ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಬಾಲಕಿಯನ್ನು ಸೋಮವಾರ ರಾತ್ರಿ ಸುಮಾರು ಒಂಬತ್ತು ಗಂಟೆಗಳ ನಂತರ ರಕ್ಷಿಸಲಾಗಿದೆ. ಸೇನೆ ಮತ್ತು ಎನ್ ಡಿ ಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿದವು.
ರಾತ್ರಿ 9:50 ರ ಸುಮಾರಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು 30 ಅಡಿ ಆಳದ ಕೊಳವೆಬಾವಿಯಿಂದ ಹೊರತೆಗೆದು ಚಿಕಿತ್ಸೆಗಾಗಿ ಜಾಮ್ನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಾಲಕಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಎಚ್.ಬಿ.ಭಗೋರಾ ಹೇಳಿದ್ದಾರೆ.