
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೀರಿನ ಬಿಲ್ ಬಾಕಿ ಮನ್ನಾ ಮಾಡಲು ತೀರ್ಮಾನಿಸಲಾಗಿದೆ.
ಈ ಮೂಲಕ ಕಾಂಗ್ರೆಸ್ ಸರ್ಕಾರ ಜನತೆಗೆ ಕೊಡುಗೆ ನೀಡಿದ್ದು, ಬಾಕಿ ಉಳಿಸಿಕೊಂಡಿದ್ದ ನೀರಿನ ಬಿಲ್ ಮನ್ನಾ ಮಾಡಲಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ 1800 ಕೋಟಿ ರೂಪಾಯಿ ಹೊರೆಯಾಗಲಿದೆ. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನೀರಿನ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ತಿಂಗಳಿಗೆ 50 ರೂಪಾಯಿ ನೀರಿನ ಕರ ನಿಗದಿಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.