ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಈಗಾಗಲೇ ಹಲವಾರು ದಾಖಲೆಗಳನ್ನು ಬರೆದಿದ್ದು, ಇನ್ನೇನು ಡಿಸೆಂಬರ್ 29ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ.
ಕಾಟೇರ ಚಿತ್ರತಂಡ ಇದೀಗ ಮಂಡ್ಯದಲ್ಲಿ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಡಿಸೆಂಬರ್ 23ರಂದು ಸಂಜೆ 5:00 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ರೈತರ ಹಾಡೊಂದನ್ನು ರಿಲೀಸ್ ಮಾಡಲಿದ್ದಾರೆ.
ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್, ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಕೆ ಎಂ ಪ್ರಕಾಶ್ ಅವರ ಸಂಕಲನ ಹಾಗೂ ವಿ ಹರಿಕೃಷ್ಣ ಸಂಗೀತವಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಆರಾಧನಾ ಮುಖ್ಯ ಭೂಮಿಕೆಯಲ್ಲಿದ್ದು, ಹಿರಿಯ ನಟಿ ಶ್ರುತಿ ಸೇರಿದಂತೆ ಕುಮಾರ್ ಗೋವಿಂದ್, ಮಾಸ್ಟರ್ ರೋಹಿತ್, ಬಿರಾದಾರ್, ಜಗಪತಿ ಬಾಬು ತೆರೆ ಹಂಚಿಕೊಂಡಿದ್ದಾರೆ,